ಪ್ರಗತಿವಾಹಿನಿ ಸುದ್ದಿ; ರಾಜ್ಯದ ಹಲವೆಡೆ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳುರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಜುಲೈ 7ರ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 9ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ವಾರದಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಕರಾವಳಿ ಜಿಲ್ಲೆ ಹೊರತುಪಡಿಸಿ ಮಳೆಯ ಅಬ್ಬರ ಕಡಿಮೆಯಾಗಿದೆ ಎಂದೇ ಹೇಳಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ