Karnataka News

*ಬಿರುಗಾಳಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಆಗಸ್ಟ್ 6ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರಜೇಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ,ಮೀ ವರೆಗೂ ಗಾಳಿ ಬೀಸಲಿದೆ.

Home add -Advt

ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಹಲವೆಡೆ ಹಾಗೂ ದಕ್ಷಿಣ ಒಳನಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ತುಮಕೂರು, ಧಾರವಾಡ, ಹಾವೇರಿ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಬೀದರ್, ಕಲಬುರ್ಗಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಬಾಗಲಕೋಟೆ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ.

Related Articles

Back to top button