Karnataka News

*ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಯಾವ ಭಾಗಗಳಲ್ಲಿ ಮಳೆಯಾಗಲಿದೆ ಎಂಬ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ಬೆಳಿಗ್ಗೆ 8 ಗಂಟೆವರೆಗಿನ ಮಾಹಿತಿ ಇಲ್ಲಿದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೋಡಗಳ ಚಲನೆ ಆಗ್ನೇಯ ಕಡೆಗೆ ವಾಲಿರುವುದರಿಂದ ಮಡಿಕೇರಿ ಘಾಟಿಯ ಕೆಳಗಿನ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ.

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು (ಥ್ರೋ ಚೆನ್ನಾಗಿರುವುದರಿಂದ), ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕ್ಷೀಣಿಸಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button