Karnataka News

*ಈ ಜಿಲ್ಲೆಗಳಲ್ಲಿ ಮಳೆ; ಕೆಲ ಜಿಲ್ಲೆಗಳಲ್ಲಿ ಬಿಸಿಲು ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದ್ದು, ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.


ಈಗಿನಂತೆ ಸೆಪ್ಟೆಂಬರ್ 16ರ ವರೆಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚೆನೆ ಇದೆ. ಆದರೆ ಸೆಪ್ಟೆಂಬರ್ 13ರಿಂದ ಬಿಸಿಲಿನ ಅವಧಿ ಸ್ವಲ್ಪ ಜಾಸ್ತಿ ಇರಬಹುದು.

Home add -Advt

ಮಲೆನಾಡು : ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಸೆಪ್ಟೆಂಬರ್ 16ರ ತನಕವೂ ಬಿಸಿಲು, ಮೋಡ ಹಾಗೂ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಒಳನಾಡು : ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಸೆಪ್ಟೆಂಬರ್ 14 ಹಾಗೂ 15ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉತ್ತರ ಪ್ರದೇಶದಲ್ಲಿಯ ವಾಯುಭಾರ ಕುಸಿತವು ಉತ್ತರಾಖಂಡಗೆ ಚಲಿಸಿ ಸೆಪ್ಟೆಂಬರ್ 13 ರಂದು ಹಿಮಾಲಯ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

Related Articles

Back to top button