ಪ್ರಗತಿವಾಹಿನಿ ಸುದ್ದಿ: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಳೆಯ ವ್ಯಾಪ್ತಿಯೂ ಹೆಚ್ಚಿರಲಾರದು. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ನವೆಂಬರ್ 6 ಮತ್ತು 7ರಂದು ಬಿಡುವು ಪಡೆವ ಮಳೆಯು 8ರಿಂದ ಅಲ್ಲಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, 10ರಿಂದ ಹೆಚ್ಚಾಗುವ ಸಾಧ್ಯತೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 8 ಅಥವಾ 9ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ