Kannada NewsKarnataka NewsLatest

*ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ; ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖವಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬಿರುಗಾಳಿ ಕೂಡ ಬೀಸಲಿದೆ. ಗಾಳಿಯ ವೇಗ ಗಂಟೆಗೆ 44-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Home add -Advt

ಇನ್ನು ದಕ್ಷಿಣ ಒಳನಾಡಿನ ಹಾಗು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಲೆಯಾಗಲಿದೆ ಎಂದು ತಿಳಿಸಿದೆ.


Related Articles

Back to top button