Karnataka News

*ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 9ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಜೊತೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 10ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

Home add -Advt

ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Related Articles

Back to top button