ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ದಕ್ಷಿಣ ಒಳನಾಡು, ಉತರ ಒಳನಾಡಿನ ಬಹುತೆಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಜುಲೈ 19ರ ಬಳಿಕ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಧಾರಾಕಾರ ಮಳೆ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆ ಸಾಧ್ಯತೆ ಇದೆ.
ದಕ್ಷಿನ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಮುಂಗಾರು ದುರ್ಬಲತೆ ಮುಂದುವರೆಯಲಿದ್ದು, ಜುಲೈ 19ರಿಂದ ಮಳೆ ಜೋರಾಗುವ ನಿರೀಕ್ಷೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ