Latest
*ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಒಂದೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು,ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿವೆ.
ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಶೇ.90ರಿಂದ 95ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




