
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ.
ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆದರೆ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಬೀಸಲಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.