ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದೆ. ಸೆ.30ಕ್ಕೆ ಮುಂಗಾರು ಮುಗಿಯಲಿದ್ದು, ಅ.1ರಿಂದ ಹಿಂಗಾರು ಆರಂಭವಾಗಲಿದೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬಾಗಲಕೊಟೆ, ಗದಗ,ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಇಳಿಮುಖವಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆ.28ರಿಂದ ಮಳೆ ಕ್ಷೀಣಿಸಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ