ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿಕ ಕೆಲ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕಲಬುರ್ಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಟ ಉಷ್ಣಾಂಶ ದಾಖಲಾಗಿದೆ. ಇನ್ನುಳಿದಂತೆ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ತಲಾ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ