Karnataka NewsLatest

*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಮರ ಬಿದ್ದು ಓರ್ವ ದುರ್ಮರಣ


ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಿನ್ನೆ ಕೂಡ ಮಳೆಯಾಗಿತ್ತು. ಇಂದು ಕೂಡ ಮಳೆ ಮುಂದುವರೆಯಲಿದೆ. ಅದರಲ್ಲಿಯೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಆಗಾಗ ಬಿಸಿಲು ವಾತಾವರಣವಿದೆ.

ಏಪ್ರಿಲ್ 23ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಮುಂದುವರೆಯಲಿದೆ.

ಇನ್ನು ಶಿವಮೊಗ್ಗದಲ್ಲಿ ನಿನ್ನೆ ಸುರಿದ ಬಿರುಗಾಳಿ ಮಳೆಯಿಂದಾಗಿ ಅವಾಂತರಗಳು ಸಂಭವಿಸಿವೆ. ತೀರ್ಥಹಳ್ಳಿ ತಾಲೂಕಿನ ತೊರೆಬೈಲು ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಅಕೇಶಿಯಾ ಮರ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನ್ಡೆದಿದೆ.

ಜಯಂತ್ ಭಟ್ (64) ಮೃತ ದುರ್ದೈವಿ. ಕೋನಂದೂರಿನಿಂದ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

Related Articles

Back to top button