Latest

*ಮತ್ತೆ ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಾರದ ಹಿಂದಷ್ಟೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಇಂದಿನಿಂದ ಮೂರು ದಿನಗಳಕಾಲ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಹಾಗೂ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಎರದು ಆಂಟಿ ಸೈಕ್ಲೋನ್ ಗಳು ರೂಪುಗೊಂಡಿದ್ದು, ಇದು ತೇವಾಂಶವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ದೇಶದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ.

ಪಶ್ಚಿಮ ಮಾರುತಗಳು ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿರುವುದರಿಂದ ಪೆನಿನ್ಸುಲಾರ್ ಭಾರತದವರೆಗೆ ನುಸುಳುತ್ತಿರುವುದರಿಂದ ತಂಪಾದಗಾಳಿಯು ಘನೀಕರಣದ ಮಟ್ಟವನ್ನು ಕಡಿಮೆ ಮಾಡಿದೆ. ಆದ್ದರಿಂದ ಅದು ಆಲಿಕಲ್ಲು, ಮಂಜುಗಡ್ಡೆ ರೂಪದಲ್ಲಿ ಸುರಿಯುತ್ತಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇಂದಿನಿಂದ ವಾಯುವ್ಯ ಭಾರತದ ರಾಜಸ್ಥಾನದ ಮೇಲೆ ಚಂಡಮಾರುತದ ಪ್ರಭಾವ ಬೀರಲಿದೆ. ರಾಜಸ್ಥಾನ, ಕರ್ನಾಟಕದ ಹಲವೆಡೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ದೆಹಲಿ, ಪಂಜಾಬ್, ಹರಿಯಾಣದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt
https://pragati.taskdun.com/karnatakarain-updateimd/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button