Latest

*ಭಾರಿ ಮಳೆ: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ರೆಡ್ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಹೆಚ್ಚುತ್ತಿದ್ದು, ಕರಾವಳಿ ಹಾಗೂ ಮಲೆನಾಡುಭಾಗದಲ್ಲಿ ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಕಳೆದ 15 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ನಡುವೆ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಬೀದರ್, ಬೆಳಗವೈ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Related Articles

Back to top button