ಪ್ರಗತಿವಾಹಿನಿ ಸುದ್ದಿ; ಉಡುಪಿ: ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಶೂನ್ಯವಾಗಿದೆ ಹೀಗಾಗಿ ದಸರಾ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ದಸರಾ ಮುಗಿದ ತಕ್ಷಣ ಬಿಸಿಯೂಟ ವ್ಯವಸ್ಥೆ ಪ್ರಾರಂಭಿಸಲಾಗುವುದು. ಆಯಾ ಜಿಲ್ಲೆಗಳಲ್ಲಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ದಸರಾ ಮುಗಿಯುತ್ತಿದ್ದಂತೆ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡಲಾಗುತ್ತದೆ ಎಂದರು.
ಶಾಲೆ ಆರಂಭವಾದ ಮಾತ್ರಕ್ಕೆ ಕಡ್ಡಾಯವಾಗಿ ವಿದ್ಯಾರ್ಥಿಗಳು ಶಾಲೆಗೆ ಬರಬೇಕೆಂದಿಲ್ಲ. ಆನ್ ಲೈನ್, ಆಫ್ ಲೈನ್ ಎರಡೂ ಮಾದರಿಯಲ್ಲಿ ತರಗತಿಗಳು ನಡೆಯಲಿವೆ. ಆದರೆ ಆನ್ ಲೈನ್ ನಿಂದಾಗಿ ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆಯಾಗಿದೆ. ಹೈಸ್ಕೂಲ್ ಗಳಲ್ಲಿ ಮಕ್ಕಳ ಹಾಜರಾತಿ ಶೇ.90ರಷ್ಟಿದೆ ಎಂದು ಹೇಳಿದರು.
ಸ್ವಂತ ಹಣ ಭರಿಸಿ ರೈತರ ನೆರವಿಗೆ ಧಾವಿಸಿದ ದಿಲೀಪ್ ಕುಮಾರ: ಎಲ್ಲರ ಪ್ರಶಂಸೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ