
ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ರಾಜ್ಯದಲ್ಲಿ ಚುನಾವಣಾ ಆಯೋಗ ವಿಸ್ತರಿಸಿದೆ.
ಈ ಹಿಂದೆ ಆಗಸ್ಟ್ 8ಕ್ಕೆ ಕೊನೆಗೊಳ್ಳಬೇಕಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಆಗಸ್ಟ್ 17ರ ವರೆಗೆ ಮುಂದುವರಿಯಲಿದೆ. ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯದ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ವಿಸ್ತರಣೆಯಿಂದಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓಗಳು) ಆಗಸ್ಟ್ 17ರ ವರೆಗೂ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುವ ಮತ್ತು ಪರಿಷ್ಕರಿಸುವ ಕಾರ್ಯವನ್ನು ಮುಂದುವರಿಸಲಿದ್ದಾರೆ. ಎಸ್ಐಆರ್ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ 24ರಂದು ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಕರಡು ಪಟ್ಟಿಯಲ್ಲಿ ಹೆಸರಿಲ್ಲದವರು ಅಥವಾ ತಿದ್ದುಪಡಿ ಅಗತ್ಯವಿರುವವರು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಅಂತಿಮವಾಗಿ, ಪರಿಷ್ಕೃತ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮತದಾರರು ಈ ದಿನಾಂಕಗಳನ್ನು ಗಮನಿಸಿ ತಮ್ಮ ಮಾಹಿತಿಗಳನ್ನು ಪರಿಶೀಲಿಸಲು ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಿಸಲು ಸಹಕರಿಸಬೇಕು.




