Kannada NewsKarnataka NewsLatestNational

*77ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಇನ್ನೆರಡು ದಿನ ಮಾತ್ರ ಬಾಕಿ ಇದೆ. ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯ ಪಥದಲ್ಲಿ ಪಥಸಂಚಲನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಆದರೆ ಈಬಾರಿ ಪಥಸಂಚಲನದಲ್ಲಿ ಕರ್ನಾಟಜದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಿಲ್ಲ. ಇದು ಕೊನೇ ಕ್ಷಣದಲ್ಲಿ ರಾಜ್ಯದ ಜನತೆಗೆ ನಿರಾಸೆಯನ್ನುಂಟುಮಾಡಿದೆ.

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯಡಿ ಸ್ತಬ್ಧಚಿತ್ರವನ್ನ ಸಿದ್ಧಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಾಜ್ಯದ ಸ್ತಬ್ಧಚಿತ್ರ ಪರೇಡ್‌ನಿಂದ ಹೊರಬಿದ್ದಿದೆ. ಆತ್ಮನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ‘ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಸಿದ್ಧಪಡಿಸಲಾಗಿತ್ತು. ಮಿಲೆಟ್ಸ್ ಟು ಮೈಕ್ರೋಚಿಪ್ ಸ್ತಬ್ಧಚಿತ್ರದ ಮೂಲಕ ಕರ್ನಾಟಕದ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆ ಹಾಗೂ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆ ಬಗ್ಗೆಯೂ ಮಾಹಿತಿ ನಿಟ್ಟಿನಲ್ಲಿ ಈ ಸ್ತಬ್ಧಚಿತ್ರ ನಿರ್ಮಿಸಲಾಗಿತ್ತು. ಕರ್ನಾಟಕವು ಕೃಷಿ ಕೈಗಾರಿಕೆ, ನಾವೀನ್ಯತೆ ಮತ್ತು ಸಂಸ್ಕೃತಿಯಲ್ಲಿ ಸಮತೋಲಿತ ಪ್ರಗತಿ ಮೂಲಕ ರಾಷ್ಟ್ರವನ್ನು ಸಮೃದ್ಧ ಮತ್ತು ಸುಸ್ಥಿರ ಭವಿಷ್ಯದತ್ತ ಕೊಂಡೊಯ್ಯುತ್ತಿದೆ. ಆತ್ಮನಿರ್ಭರ ಭಾರತದ ದೃಷ್ಟಿಗೆ ಕರ್ನಾಟಕ ಸಮಗ್ರ ಕೊಡುಗೆ ಸಾರುವ ಸ್ತಬ್ಧಚಿತ್ರ ಇದಾಗಿತ್ತು. ಆದರೆ ಗಣರಾಜ್ಯೋತ್ಸವಕ್ಕೆ ಎರಡು ದಿನ ಮೊದಲು ರಾಜ್ಯದ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿಲ್ಲ ಎಂಬುದು ಗೊತ್ತಾಗಿದೆ.

ಇದು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೈಸೂರು ಬಿಜೆಪಿ ಸಂಸದ ಯದುವೀರ್ ಒಡೆಯರ್, ಗಣರಾಜ್ಯೋತ್ಸವ ಪರೇಡ್​ನಲ್ಲಿ ಈ ಬಾರಿ ರಾಜ್ಯದ ಟ್ಯಾಬ್ಲೋ ಭಾಗವಹಿಸುತ್ತಿಲ್ಲ. ಸರಿಯಾಗಿ ಪತ್ರ ವ್ಯವಹಾರ ನಡೆದಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಆಯ್ಕೆಯಾಗಿಲ್ಲ ಎಂದಿದ್ದಾರೆ.

77ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮಿಲೆಟ್ಸ್ ಟು ಮೈಕ್ರೋಚಿಪ್ ಎಂಬ ಅತ್ಯದ್ಭುತ ಕಾನ್ಸೆಪ್ಟ್ ನಲ್ಲಿ ನಿರ್ಮಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಶ ನೀಡಿಲ್ಲ. ಇದು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿವ ಅವಮಾನ. ಮೊನ್ನೆ ರಾಜ್ಯಪಾಲರ ಮೂಲಕವಾಗಿ ಕೇಂದ್ರ ಬಿಜೆಪಿ ಕರ್ನಾಟಕಕ್ಕೆ ಅವಮಾನ ಮಾಡಿತು. ಇಂದು ಸ್ತಬ್ಧಚಿತ್ರಕ್ಕೆ ಅವಕಶ ನೀಡದೇ ಅವಮಾನ ಮಡುತ್ತಿದೆ. ಕೇಂದ್ರ ಸರ್ಕಾರಕ್ಕೆ ಕಂಡರೆ ಆಗಲ್ಲ. ನಮ್ಮ ರಾಜ್ಯವನ್ನು ಕಡೆಗಣಿಸುತ್ತದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ನಮ್ಮ ರಾಜ್ಯದ ಬಿಜೆಪಿ ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಡುತ್ತಿಲೂ ಇಲ್ಲ. ಅವರಿಗೆ ಇದ್ಯಾವುದೂ ಬೇಕಾಗಿಲ್ಲ. ಜನವರಿ 26 ರಂದು 30 ಟ್ಯಾಬ್ಲೋಗಳಿಗೆ ಅವಕಾಶ ನೀಡಲಾಗಿದೆ. 17 ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಹೋಗುತ್ತವೆ. ಕೇರಳ, ತಮಿಳುನಾಡು, ಪುದುಚೆರಿ ಟ್ಯಾಬ್ಲೋಗೂ ಅವಕಾಶ ಕೊಟ್ಟಿದ್ದಾರೆ ಕರ್ನಾಟಕ ಟ್ಯಾಬ್ಲೋಗೆ ಮಾತ್ರ ಅವಕಾಶ ಕೊಟ್ಟಿಲ್ಲ ಇಲ್ಲಿ ಚುನಾವಣೆ ಇಲ್ಲ. ಉಳಿದ ರಾಜ್ಯಗಳಲ್ಲಿ ಚುನಾವಣೆಯಿದೆ. ರಾಜ್ಯದ ಮತದಾರರು ಈ ಬಗ್ಗೆ ಅರ್ಥಮಾಡಿಕೊಳ್ಳಬೇಕು. ಕೇಂದ್ರದ ಈ ನಡೆ ಖಂಡನೀಯ ಎಂದು ಕಿಡಿಕಾರಿದರು.

Related Articles

Back to top button