Kannada NewsKarnataka NewsLatest

*ರಾಜ್ಯದಲ್ಲಿ ಒಂದು ವಾರಗಳ ಕಾಲ ಹೆಚ್ಚಲಿದೆ ರಣ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ದೇಶದಾದ್ಯಂತ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲಿ ಇನ್ನು ಒಂದು ವಾರಗಳ ಕಾಲ ರಣ ಬಿಸಿಲು ಹೆಚ್ಚಲಿದ್ದು, ಜನರು ಮುನ್ನೆಚ್ಚರಿಕೆ ವಹಿಸಿ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯಾದ್ಯಂತ ಬ್ಬಿಸಲ ಝಳ ಈಗಾಗಲೇ ಹೆಚ್ಚಾಳವಾಗಿದ್ದು, ಕರುನಾಡು ಕಾದ ಕಾವಲಿಯಂತಾಗಿದೆ. ಜನರು ಬಿಸಿಲ ಝಳದಿಂದ ತತ್ತರಿಸಿ ಹೋಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸುಡು ಬಿಸಿಲು, ಬಿಸಿ ಗಾಳಿ ಹೊಡೆತಕ್ಕೆ ಜನರಲ್ಲಿ ಉಸಿರಾಟದ ಸಮಸ್ಯೆಗಳು ಕಾಡಲಾರಂಭಿಸಿದೆ. ಈ ನಡುವೆ ರಾಜ್ಯದಲ್ಲಿ ಇನ್ನೂ ಒಂದುವಾರಗಳ ಕಾಲ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಹಗಲಿನಲ್ಲಿ ಮಾತ್ರವಲ್ಲ ರಾತ್ರಿಯಲ್ಲಿಯೂ ಬಿಸಿಗಾಳಿ ಬೀಸುತ್ತಿದ್ದು, ಹೀಟ್ ವೇವ್ ನಿಂದ ಜನರು ಕಂಗಾಲಾಗುತ್ತಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button