Karnataka NewsLatest

*ಎಲ್ಲಾ ದೇವಸ್ಥಾನಗಳ ಪ್ರಸಾದ ಪರೀಕ್ಷೆಗೆ ಸೂಚನೆ: ರಾಜ್ಯ ಮುಜರಾಯಿ ಇಲಾಖೆಯಿಂದ ಸುತ್ತೋಲೆ*

ಪ್ರಗತಿವಾಹಿನಿ ಸುದ್ದಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಈ ಘಟನೆ ಬೆನ್ನಲ್ಲೇ ಕರ್ನಾಟಕ ಮುಜರಾಯಿ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ದೇವಾಲಯಗಳಲ್ಲಿಯೂ ಪ್ರಸಾದ ಪರೀಕ್ಷೆ ನಡೆಸುವಂತೆ ಆದೇಶ ನೀಡಿದೆ.

ಈಗಾಗಲೇ ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೇವರ ಸೇವೆ, ಪ್ರಸಾದ ತಯಾರಿಕೆಯಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಆದೇಶ ಹೊರಡಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ದೇವಸ್ಥಾನಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ರಾಜ್ಯದ ದೇವಾಲಯಗಳಲ್ಲಿ ಪ್ರಸಾದ ಸುರಕ್ಷಿತ ಹಾಗೂ ಗುಣಮಟ್ಟದಿಂದ ಕೂಡಿದೆ. ಆದರೆ ಭಕ್ತರಿಗೆ, ಜನರಿಗೆ ಪ್ರಸಾದ ವಿಚಾರದಲ್ಲಿ ಅನುಮಾನ ಇರಬಾರದು. ಹಾಗಾಗಿ ಪ್ರಸಾದಗಳ ಪರೀಕ್ಷೆ ನಡೆಸುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button