ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ.
ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳು ನಾಳೆಯಿಂದ ಅನ್ ಲಾಕ್ ಆಗಲಿದ್ದು, ಆದರೆ ಕಠಿಣ ನಿಯಮಗಳು ಮುಂದುವರೆಯಲಿವೆ.
19 ಜಿಲ್ಲೆಗಳಲ್ಲಿ ನಾಳೆಯಿಂದ ಏನೆಲ್ಲ ಲಭ್ಯ, ಏನೆಲ್ಲ ಅಲಭ್ಯ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಯಾವುದು ಲಭ್ಯ:
* ಕಾರ್ಖಾನೆಗಳಲ್ಲಿ ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ
* ಗಾರ್ಮೆಂಟ್ಸ್ ಕೈಗಾರಿಕೆಗೆ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ
* ಅಗತ್ಯವಸ್ತುಗಳ ಖರೀದಿ ಸಮಯ ವಿಸ್ತರಣೆ. ಬೆಳಿಗ್ಗೆ 6ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ
* ನಿರ್ಮಾಣ ಚಟುವಟಿಕೆ, ಕಟ್ಟಡ ಕಾಮಗಾರಿಗೆ ಅವಕಾಶ
* ಬೆಳಿಗ್ಗೆ 5ರಿಂದ 10ಗಂಟೆವರೆಗೆ ಪಾರ್ಕ್ ಗಳು ಓಪನ್
* ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ
* ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ
*ಹೋಟೇಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ
* ಅಂತರ್ಜಾಲ, ಟೆಲಿಕಾಂ ಸೇವೆ ಸಿಬ್ಬಂದಿ ಓಡಾಟಕ್ಕೆ ಅವಕಾಶ
* ವಿಮಾನ ರೈಲು ಸಂಚಾರಕ್ಕೆ ಅವಕಾಶ
*ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ
ಯಾವುದು ಅಲಭ್ಯ:
* ಕೆ ಎಸ್ ಆರ್ ಟಿಸಿ ಬಸ್, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ
* ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರ ಬಂದ್
* ಅಂತರ್ ರಾಜ್ಯ ಸಂಚಾರಕ್ಕೆ ನಿರ್ಬಂಧ
* ರಾಜ್ಯಾದ್ಯಂತ ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಿದ್ದು ಸಂಚಾರಕ್ಕೆ ಅವಕಾಶವಿಲ್ಲ
* ಇನ್ನು ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ
ಕೇಂದ್ರ ಸಂಪುಟ ವಿಸ್ತರಣೆ ವಿಚಾರ; ಪ್ರಹ್ಲಾದ್ ಜೋಶಿ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ