Kannada NewsKarnataka NewsLatestUncategorized

ಕರಾವಳಿಯಲ್ಲಿ ಭಾರಿ ಮಳೆ ಹಿನ್ನೆಲೆ; ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರ್ವಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಿಲ್ಲೆಯ ಭಟ್ಕಳ, ಅಂಕೋಲಾ, ಜೋಯಿಡಾ, ಕಾರವಾರ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಮುದ್ರ ತೀರದ ಜನರು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ.

Related Articles

Back to top button