Kannada NewsKarnataka NewsLatest

*ಈ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ*: *ಹಲವು ಜಿಲ್ಲೆಗಳಲ್ಲಿ ಭಾರಿ ಚಳಿ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಒಣಹವೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಮೈ ಕೊರೆವ ಚಳಿಯ ವಾತಾವರಣವಿದೆ.

ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಭಾರಿ ಚಳಿ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ನವೆಂಬರ್ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.

ರಾಜ್ಯದಲ್ಲಿ ಮಳೆ ಇಲ್ಲದ ವಾತಾವರಣದ ನಡುವೆ ಚಳಿ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿವೆ. ನಾಳೆ ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button