Kannada NewsKarnataka NewsLatest

*ರಣ ಬಿಸಿಲು; ತಾಪಮಾನ ಹೆಚ್ಚಳ ನಡುವೆಯೇ ಇಂದು ಸಂಜೆ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಾದ್ಯಂತ ಬಿಸಿಲ ಝಳ ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಬಿಸಿಗಾಳಿ, ಉಷ್ಣಾಂಶ ಏರಿಕೆಯಿಂದಾಗಿ ಜನರು ಹೈರಾಣಾಗುತ್ತಿದ್ದಾರೆ. ಈ ನಡುವೆ ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡಿನಲ್ಲಿ ತೀವ್ರ ಸೆಖೆ ಮುಂದುವರಿದಿದ್ದು, ಕಲಬುರಗಿ, ರಾಯಚೂರಿನಲ್ಲಿ 42°C ದಾಟಲಿದೆ. ಮೈಸೂರು, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷಿಸಲಾಗಿದೆ.

Home add -Advt

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 35°C ರಿಂದ 37°C ರವರೆಗೆ ದಾಖಲಾಗುವ ಸಾಧ್ಯತೆಯಿದೆ. ಮಧ್ಯಾಹ್ನ ಬಿಸಿಲು ಹೆಚ್ಚಾಗಿದ್ದರೂ, ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ 60% ನಷ್ಟಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಸೆಖೆ ಹೆಚ್ಚಿರಲಿದೆ. ಗಾಳಿಯಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಅಸಹನೀಯ ವಾತಾವರಣವಿರಬಹುದು. ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 40°C ದಾಟುವ ಸಾಧ್ಯತೆಯಿದೆ.

ಮೈಸೂರು, ಹಾಸನ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ರಾಯಚೂರು ಮತ್ತು ಬಳ್ಳಾರಿಯಲ್ಲಿ ತಾಪಮಾನ ಅತಿ ಹೆಚ್ಚ್ಜು ಅಂದರೆ 41°C – 42°Cಯಷ್ಟಿರಲಿದೆ. ಮಧ್ಯಾಹ್ನ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಬೇಕು. ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಒಣ ಹವೆ ಮುಂದುವರಿಯಲಿದ್ದು, ತಾಪಮಾನದಲ್ಲಿ ಏರಿಕೆಯಾಗಲಿದೆ.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Related Articles

Back to top button