Kannada NewsKarnataka NewsLatest

*ಯಾವ ಜಿಲ್ಲೆಗಳಲ್ಲಿ ಮಳೆ; ಯಾವ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಕೆ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ವರುಣಾರ್ಭಟಕ್ಕೆ ಅನಾಹುತಗಳು ಸಂಭವಿಸಿವೆ. ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣ ದೇವ ತಂಪೆರೆದಿದ್ದಾನೆ. ಆದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯ ಸುಳಿವಿಲ್ಲ.

ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ ಭಾಗದಲ್ಲಿ ಮಳೆಯಾಗಿಲ್ಲ. ಆದರೆ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ಏಪ್ರಿಲ್ 15 ಹಾಗೂ 16ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೀದರ್, ಬೆಳಗಾವಿ, ಧಾರವಾಡ, ವಿಜಯಪುರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.

ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಾಳೆಯಾಗಲಿದೆ. ಏಪ್ರಿಲ್ 20ರವರೆಗೂ ಅಲ್ಲಲ್ಲಿ ಮಳೆಯಾಗಲಿದೆ.

ಕರಾವಳಿಯಲ್ಲಿ ಒಣಹವೆ ಇರಲಿದ್ದು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button