Film & EntertainmentKarnataka NewsLatest

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಿದ್ದು, ಇಂದು ಕೂಡ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ.

Home add -Advt

ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ.

Related Articles

Back to top button