Cancer Hospital 2
Laxmi Tai Society2
Beereshwara add32

*ರಾಜ್ಯದ ಜನರಿಗೆ ಅಲರ್ಟ್; ಎರಡು ದಿನಗಳಲ್ಲಿ ಏರಿಕೆಯಾಗಲಿದೆ ಉಷ್ಣಾಂಶ*

Anvekar 3

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ರಾಜ್ಯದಲ್ಲಿ ಒಣಹವೆ ಆರಂಭವಾಗಿದ್ದು, ಹಲವೆಡೆ ಬಿಸಿಲಿನ ಝಳ ಹೆಚ್ಚಾಗಿದೆ. ಈ ನಡುವೆ ಇನ್ನೆರಡು ದಿನಗಳಲ್ಲಿ ತಾಪಾಮಾನ ಹೆಚ್ಚಲಿದೆ ಎಂದು ತಿಳಿದುಬಂದಿದೆ.

Emergency Service

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ ಧಾರವಾಡ, ಕಲಬುರ್ಗಿ, ರಾಯಚೂರು, ಗದಗ, ಕೊಪ್ಪಳ, ವಿಜಯಪುರ, ವಿಜಯನಗರ, ಬಳ್ಳಾರಿ, ಮಂಡ್ಯ, ಮೈಸೂರು ಚಾಮರಾಜನಗರ,ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ 31 ಡಿಗ್ರಿ ಗರಿಷ್ಠ ಉಷ್ಣಾಂಶ 17 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿಯಲ್ಲಿ 31.5 ಡಿಗ್ರಿ ಗರಿಷ್ಠ ಉಷ್ಣಾಂಶ, ಬೀದರ್ ನಲ್ಲಿ 30 ಡಿಗ್ರಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35 ಡಿಗ್ರಿ ಗರಿಷ್ಠ ಉಷ್ಣಾಂಶ, ಗದಗದಲ್ಲಿ 33.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Gokak Jyotishi add 8-2
Bottom Add3
Bottom Ad 2

You cannot copy content of this page