ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮೈ ಕೊರೆಯುವ ಚಳಿ ಆರಂಭವಾಗಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಚಳಿಯಿಂದ ಜನರು ತತ್ತರಿಸುವಂತಾಗಿದೆ.
ಕರಾವಳಿ ಜಿಲ್ಲೆಗಳು, ಬೆಳಗಾವಿ, ಬೀದರ್, ಹಾವೇರಿ, ಗದಗ, ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಚಳಿ ಇದ್ದು. ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಚಳಿ ಇದೆ. ಈ ಜಿನ್ನೆಲೆಯಲ್ಲಿ ಒಣ ಹವೆ ಮುಂದುವರೆಯಲಿದೆ.
ವಿಜಯಪುರ ಜಿಲ್ಲೆಯಲ್ಲಿ 11.4 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 30.7 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 19.30 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 16.0 ಡಿಗ್ರಿ ಕನಿಷ್ಠ ಉಷ್ಣಾಂಶ, ಬೀದರ್ 29.6 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಚಳಿ ಇದ್ದು, ಹಲವೆಡೆಗಳಲ್ಲಿ ದಟ್ಟ ಮಂಜು ಆವರಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ