ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೈ ಕೊರೆವ ಚಳಿ ಜೊತೆಗೆ ಶೀತ ಗಾಳಿ ಆರಂಭವಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನಗಳಕಾಲ ಭಾರಿ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮೈಕೊರೆವ ಚಳಿ ಇದೆ. ಆದರೆ ಉತ್ತರ ಒಳನಾಡಿನ ಹಲವೆಡೆ ಚಳಿ ಪ್ರಮಾಣ ಇನ್ನಷ್ಟು ಹೆಚ್ಚಲಿದ್ದು, ಮಂಜು ಕವಿದ ವಾತಾವರಣವಿರಲಿದೆ.
ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ರಾಯಚೂರು, ಗದಗದಲ್ಲಿ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನ ಇರಲಿದೆ. ಈಗಾಗಲೇ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ದಾವಣಗೆರೆಯಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಹೆಚ್ ಎ ಎಲ್ ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್, ಕಲಬುರಗಿ, ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಇರಲಿದೆ. ವಿಪರೀತ ಚಳಿ, ಶೀತಗಾಳಿಯಿಂದಾಗಿ ಕೆಮ್ಮು, ನೆಗಡಿ, ಜ್ವರ, ಮೈ-ಕೈ ನೋವಿನಂತಹ ಕಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ