*ಮುಂದಿನ ಐದು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಚಳಿ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೈ ಕೊರೆವ ಚಳಿ ಜೊತೆಗೆ ಶೀತ ಗಾಳಿ ಆರಂಭವಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನಗಳಕಾಲ ಭಾರಿ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮೈಕೊರೆವ ಚಳಿ ಇದೆ. ಆದರೆ ಉತ್ತರ ಒಳನಾಡಿನ ಹಲವೆಡೆ ಚಳಿ ಪ್ರಮಾಣ ಇನ್ನಷ್ಟು ಹೆಚ್ಚಲಿದ್ದು, ಮಂಜು ಕವಿದ ವಾತಾವರಣವಿರಲಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ … Continue reading *ಮುಂದಿನ ಐದು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಚಳಿ ಮುನ್ಸೂಚನೆ*