ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮೈಕೊರೆವ ಚಳಿ ಶುವುವಾಗಿದ್ದು, ಕರ್ನಾಟಕದಾದ್ಯಂತ ಇಂದಿನಿಂದ ಚಳಿ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಮೈ ಕೊರೆವ ಚಳಿ ಜೊತೆಗೆ ಒಣಹವೆ ಮುಂದುವರೆಯಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶೀತ ಪ್ರಮಾಣ ಹೆಚ್ಚಾಗಲಿದೆ.
ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಲ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಉತ್ತರ ಒಳನಾಡಿನ ಕಲಬುರಗಿ, ಹಾವೇರಿ, ಯಾದಗಿರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಚಳಿಯಾಗಲಿದೆ.
ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚಳಿ ಹೆಚ್ಚಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ