ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಮೈ ಕೊರೆಯುವ ಚಳಿ ಆರಂಭವಾಗಿದ್ದು, ಮೋಡ ಮುಸುಕಿದ ವಾಆವರಣವಿದೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಇಬ್ಬನಿಯಿಂದಾಗಿ ಚಳಿ ಹೆಚ್ಚಾಗಿದ್ದು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗು ಸಾಧ್ಯತೆ ಇದೆ.
ಇನ್ನು ಅಕಾಲಿಕ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಅಡಿಕೆ ಕೊಯ್ಲು ಮೇಲೆ ಪರಿಣಾಮ ಬೀರಿದ್ದು, ರೈತರು ಸಮಸ್ಯೆಗೀಡಾಗಿದ್ದಾರೆ. ಮಂಗಳೂರು, ತಾಳಗೊಪ್ಪ, ಗೇರಿಉಸೊಪ್ಪಮ್ ಕುಮಟಾ, ಮಂಕಿ, ಬೆಳ್ತಂಗಡಿ, ಪಣಂಬೂರು, ಉಪ್ಪಿನಂಗಡಿ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ.
ಇನ್ನು ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಳಗಾವಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ವಿಜಯಪುರದಲ್ಲಿ 15.5 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ