Karnataka News

*ಈ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಕೊರೆವ ಚಳಿ ಆರಂಭವಾಗಿದೆ. ಆಗಾಗ ಬೀಸುವ ಶೀತಗಾಳಿ ಜನರನ್ನು ಇನ್ನಷ್ಟು ಸಂಕಷ್ಟಕ್ಕೀಡುಮಾಡಿದೆ. ಈ ಮಧ್ಯೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ರಾಜ್ಯದ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು,ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ, ಗದಗ ಧಾರವಾಡ, ವಿಜಯಪುರ, ವಿಜಯನಗರ ಜಿಲ್ಲೆಗಳಲ್ಲಿ ಚಳಿ ಹಾಗೂ ಒಣಹವೆ ಮುಂದುವರೆಯಲಿವೆ.

Related Articles

Back to top button