Kannada NewsKarnataka NewsLatest

*ರಾಜ್ಯದಲ್ಲಿ ಮೈ ಕೊರೆಯುವ ಚಳಿ; ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆಯುವ ಚಳಿ ಆರಂಭವಾಗಿದ್ದು, ಈ ನಡುವೆ ಕೆಲ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ವಿಪರೀತ ಚಳಿ ಇದ್ದು, ಮಂಜು ಮುಸುಕಿದ ವಾತಾವರಣವಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮೈ ಕೊರೆಯುವ ಚಳಿ ಮಂಜು ಮುಸುಕಿದ ವಾತಾವರಣವಿರಲಿದೆ.

Home add -Advt

ಇನ್ನು ಭಾರಿ ಚಳಿ ನಡುವೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ.

ಇನ್ನು ರಾಜಧಾನಿ ಬೆಂಗಳುರಿನಲ್ಲಿ ಮೋಡಕವಿದ ವಾತಾವರಣ, ಮೈಕೊರೆಯುವ ಚಳಿ ಹಿನ್ನೆಲೆಯಲ್ಲಿ ಜನರು ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.


Related Articles

Back to top button