*ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ*

ಪ್ರಗತಿವಾಹಿನಿ ಸುದ್ದಿ; ಕಾರ್ಕಳ: ಕಾರ್ಕಳದ ಪರಶುರಾಮ ಥೀಮ್‌ ಫಾರ್ಕ್ ಗೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದರು. ಒಂದೂವರೆ ಟನ್ ಭಾರದ 33 ಅಡಿ ಎತ್ತರದ ಪರಶುರಾಮ ಮೂರ್ತಿ ಸ್ಥಾಪಿಸಿದ್ದು, ಮೂರ್ತಿ ಗುಣಮಟ್ಟದ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಪ್ರವಾಸೋದ್ಯಮ ಕ್ಷೇತ್ರವಾಗಿಸುವ ದೃಷ್ಟಿಯಿಂದ ಪಾರ್ಕ್ ಅಭಿವೃದ್ಧಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. Home … Continue reading *ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ*