Karnataka News

*ರಾಜ್ಯದಲ್ಲಿ ರಣಭೀಕರ ಮಳೆ ಮುನ್ಸೂಚನೆ: ಕಟ್ಟೆಚ್ಚರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ 3-4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ರಣಭೀಕರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಯೆಲೋ ಅಲರ್ಟ್ ಘೋಷಿಸಲಾಗಿದೆ.

ರಾಯಚೂರು, ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ಮಂಡ್ಯ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.


Related Articles

Back to top button