ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಮಳೆಯಾಗಲಿದ್ದು, 16 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಚಾಮರಾಜನಗರ, ಕೋಲಾರ, ಮೈಸೂರು ಸೇರಿದಂತೆ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ