Karnataka News

*ಈ 6 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಮೈ ಕೊರೆವ ಚಳಿ, ಒಣ ಹವೆ ಮುಂದುವರೆದಿರುವ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಕೂಡ 6 ಜಿಲ್ಲೆಗಳಲ್ಲಿ ಮಳೆಯಗಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನಿನ್ನೆ ಕೂಡ ಮಳೆಯಾಗಿತ್ತು. ಇಂದು ಕೂಡ ತುಂತುರು ಮಳೆಯಾಗಲಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button