National

*ಭೀಕರ ಅಪಘಾತ: ಬಿಜೆಪಿ ಮುಖಂಡ ಸೇರಿ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಕರ್ನೂಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿಜೆಪಿ ಮುಖಂಡ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್ (35), ಲೋಕೇಶ್ (38) ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರು ಚಿಕ್ಕನಾಕನಹಳ್ಳಿ ಕೆಂಕೆರೆ ನಿವಾಸಿಗಳು. ನವೀನ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಎಲ್ಲರೂ ಮಂತ್ರಾಲಯಕ್ಕೆ ಹೋಗಿದ್ದರು. ರಾಯರ ದರ್ಶನ ಪಡೆದು ವಾಪಸ್ ಆಗುವಾಗ ಇನ್ನೋವಾ ಕಾರು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button