Belagavi NewsBelgaum NewsKannada NewsKarnataka News

*ನ.27ರಂದು ಯಲ್ಲಮ್ಮನ ಗುಡ್ಡದಲ್ಲಿ ಕಾರ್ತಿಕ ದೀಪೋತ್ಸವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಪ್ರಸಿದ್ಧ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ನವೆಂಬರ್ 27ರಂದು ದೀಪೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಶುಕ್ರವಾರ ಸಂಜೆ 5.30 ಗಂಟೆಗೆ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೀಪೋತ್ಸವದಲ್ಲಿ ಭಾಗವಹಿಸಬೇಕೆಂದು ಪ್ರಾಧಿಕಾರದ ಕಾರ್ಯದರ್ಶಿ ರಾಜಶ್ರೀ ಜೈನಾಪುರ ಪ್ರಕಟಣೆಯಲ್ಲಿ ಕೋರಿದ್ದಾರೆ.

Related Articles

Back to top button