Latest

ಕಾರ್ತಿ ಚಿದಂಬರಂ ನಿವಾಸದ ಮೇಲೆ CBI ಅಧಿಕಾರಿಗಳ ದಾಳಿ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೆನ್ನೈನ ನುಂಗಂಬಾಕ್ಕಂನಲ್ಲಿರುವ ಚಿದಂಬರಂ ಅವರ ಮನೆಯ ಮೇಲೆ 6 ಮಂದಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಸಿಬಿಐ ದಾಳಿ ವೇಳೆ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

ಚೀನಾ ಪ್ರಜೆಗಳಿಗೆ ಅಕ್ರಮವಾಗಿ ವೀಸಾ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇತ್ತೀಚೆಗಷ್ಟೆ ಕಾರ್ತಿ ಚಿದಂಬರಂ ಅವರ ದೆಹಲಿ ಹಾಗೂ ಚೆನ್ನೈ ನಿವಾಸ ಸೇರಿದಂತೆ 10 ಕಡೆಗಳಲ್ಲಿ ದಾಳಿ ನಡೆಸಿದ್ದರು.
ಸರ್ಕಾರದ ವಿರುದ್ಧ ದಂಗೆಯೆದ್ದ ನಾಗರಿಕರು; ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ; ದೇಶಬಿಟ್ಟು ಪರಾರಿಯಾದ ಅಧ್ಯಕ್ಷ ರಾಜಪಕ್ಸೆ

Related Articles

Back to top button