Karnataka News

*ಆಸ್ಪತ್ರೆ ಕಿಟಕಿಯಿಂದ ಜಿಗಿದು ಯುವಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯ ಮೂರನೇ ಮಹಡಿಯ ಕಿಟಕಿಯಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ(ಕೆ ಎಂ ಸಿ ಆರ್ ಐ)ಯಲ್ಲಿ ನಡೆದಿದೆ.

ಆದರ್ಶ್ ಗೊಂದಕರ್ (18 ) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಹುಬ್ಬಳ್ಳಿಯ ನೇಕಾರ ನಗರದ ನಿವಾಸಿಯಾಗಿರುವ ಆದರ್ಶ್ ತೀವ್ರ ಜ್ವರದಿಂದ ಬಳಲುತ್ತಿದ್ದ. ರಕ್ತದ ಪ್ಲೇಟ್ಲೆಟ್ ಕೂಡ ಕಡಿಮೆಯಾಗಿತ್ತು. ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಆದರ್ಶ್, ಇಂದು ಮುಂಜಾನೆ ಶೌಚಾಲಯಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವನು ಆಸ್ಪತ್ರೆ ಕಿಟಕಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗಂಭೀರ ಸ್ಥಿತಿಯಲ್ಲಿದ್ದ ಆತನಿಗೆ ತಕ್ಷಣ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.


Related Articles

Back to top button