
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈದರಾಬಾದ್ ನ ಎನ್ ಐಎ ಅಧಿಕಾರಿಗಳ ತಂಡ ಬಂಧಿಸಿದೆ.
ಕಾರವಾರದ ಮುದಗಾ ಗ್ರಾಮದ ವೇತನ್ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಬಂಧಿತ ಆರೋಪಿಗಳು. ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ ಪ್ರಕರಣ ಸಂಬಂಧ 2024ರ ಆಗಸ್ಟ್ ನಲ್ಲಿ ಮೂವರನ್ನು ಎನ್ ಐಎ ವಿಚಾರಣೆ ನಡೆಸಿತ್ತು.
ವೇತನ್ ತಾಂಡೇಲ್, ತೋಡೂರಿನ ಸುನೀಲ್ ಹಾಗೂ ಅಕ್ಷಯ್ ನಾಯ್ಕ್ ನನ್ನು ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಬಳಿಕ ಬಿಟ್ಟುಕಳುಹಿಸಲಾಗಿತ್ತು. ಪ್ರಕರಣದ ತನಿಖೆಗೆ ಬಂದಿದ್ದ ಎನ್ ಐಎ ಇದೀಗ ಇಬ್ಬರನ್ನು ಬಂಧಿಸಿದೆ.
ಶಂಕಿತ ಆರೋಪಿಗಳನ್ನು ಹನಿ ಟ್ರ್ಯಾಪ್ ಮಾಡಿದ್ದ ಪಾಕಿಸ್ತಾನಿ ಏಜೆಂಟ್ ಮಾಹಿತಿ ಕಲೆ ಹಾಕಿದ್ದಳು ಎನ್ನಲಾಗಿತ್ತು. ಫೇಸ್ ಬುಕ್ ಮೂಲಕ ತಾನು ಮರೈನ್ ಅಧಿಕಾರಿ ಎಂದು ಹೇಳಿಕೊಂಡಿದ್ದ ಪಾಕಿಸ್ತಾನಿ ಏಜೆಂಟ್ , ಮೂವರು ಶಂಕಿತ ಆರೋಪಿಗಳ ಮಾಹಿತಿ ಕಲೆಹಾಕಿ ಬಳಿಕ 2023ರಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿದ್ದಳು ಎನ್ನಲಾಗಿದೆ.
ವೇತನ್ ಕಾರವಾರದ ಚೆಂಡ್ಯಾದಲ್ಲಿ ಮರ್ಕ್ಯುರಿ ಹಾಗೂ ಅಲ್ಟ್ರಾ ಮರೈನ್ ಕಂಪನಿಯಲ್ಲಿ ವೇತನ್ ಹಾಗೂ ಅಕ್ಷಯ್ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಸುನೀಲ್ ಈ ಹಿಂದೆ ಸೀಬರ್ಡ್ ಕ್ಯಾಂಟೀನ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲದ್ಸ ಮಾಡುತ್ತಿದ್ದ. ಬಳಿಕ ಚಾಲಕ ವೃತ್ತಿಯಲ್ಲಿದ್ದ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ