Latest

ಕೆಎಎಸ್ ಅಧಿಕಾರಿ ಡಾ.ಸುಧಾ ಮನೆ ಮೇಲೆ ಎಸಿಬಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಅಧಿಕಾರಿ ಡಾ.ಸುಧಾ ಅವರ ನಿವಾಸದ ಮೇಲೆ ಬೆಳ್ಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಾ.ಸುಧಾ ಈ ಹಿಂದೆ ಬಿಡಿಎಯಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದರು. ಅಕ್ರಮ ಆಸ್ತಿಗಳಿಕೆ ಹಾಗೂ ಅವ್ಯವಹಾರ ಆರೋಪ ಹಿನ್ನೆಲೆಯಲ್ಲಿ ಸುಧಾ ಅವರ ಕಚೇರಿ, ನಿವಾಸ ಸೇರಿದಂತೆ 6 ಕಡೆ ಏಕಕಾಲದಲ್ಲಿ ದಾಳಿ ನಡೆದಿದೆ.

ಬೆಂಗಳೂರಿನ ಕೋಡಿಹಳ್ಳಿ ನಿವಾಸ, ಯಲಹಂಕದ ಫ್ಲಾಟ್, ಬ್ಯಾಟರಾಯನಪುರ, ಬಿಇಎಂ ಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button