
ಪ್ರಗತಿವಾಹಿನಿ ಸುದ್ದಿ: ಕೆ.ಎ.ಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ.
ವೃತ್ತಿಯಲ್ಲಿ ವಕೀಲೆಯಾಗಿರುವ ಚೈತ್ರಾ ಗೌಡ ಅವರ ಮೃತದೇಹ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಕೆ.ಎ.ಎಸ್ ಅಧಿಕಾರಿ, ಸ್ವತಃ ತಾನು ಹೈಕೋರ್ಟ್ ವಕೀಲೆಯಾಗಿದ್ದರೂ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಲು ಕಾರಣವೇನು? ಎಂಬುದೇ ನಿಗೂಢವಾಗಿದೆ.
ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಮಗ ಕೂಡ ಇದ್ದಾನೆ. ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಚೈತ್ರಾ ಗೌಡ ಈಗ ಇದ್ದಕ್ಕಿದ್ದಂತೆ ಸಂಜಯ್ ನಗರದ ಮನೆಯಲ್ಲಿ ಬೆಡ್ ರೂಮ್ ನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ಘಟನಾ ಸ್ಥಳಕ್ಕೆ ಸಂಜಯ್ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ