ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಕೆಎಎಸ್ ಅಧಿಕಾರಿ ಸುಧಾ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಧಾ ಮನೆ ಮೇಲೆ ಇತ್ತೀಚೆಗೆ ಎರಡು ಬಾರಿ ಎಸಿಬಿ ದಾಳಿ ನಡೆಸಿತ್ತು.
ಅಲ್ಲದೇ ಸುಧಾ ಅಕ್ರಮ ಆಸ್ತಿ ಗಳಿಕೆ ಕುರಿತು ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಂ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಸುಧಾ ವಿರುದ್ಧ ತನಿಖೆಗೆ ಎಸಿಬಿಗೆ ಆದೇಶಸಿತ್ತು. ಆಗಸ್ಟ್ 27ರಂದು ಸುಧಾ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಎಸಿಬಿ, ಅವರ ನಿವಾಸದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ, ಹಣ ಸೇರಿದಂತೆ, ದಾಖಲೆ ವಶಪಡಿಸಿಕೊಂಡಿತ್ತು.
ಸುಧಾ ವಿರುದ್ಧ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ