Kannada NewsKarnataka NewsLatest

*ಜೈಲಿನಿಂದ ಹೊರ ಬರುತ್ತಿದ್ದಂತೆ ಮತ್ತೆ ಬಂಧನಕ್ಕೀಡಾದ KAS ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಸರ್ಕಾರಿ ಜಮೀನು ಕಬಳಿಕೆ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಕೆಎಎಸ್ ಅಧಿಕಾರಿ ಉಮೇಶ್ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕರಿಗಳಿಂದ ಬಂಧಿಸಲ್ಪಟ್ಟಿದ್ದಾರೆ.

Home add -Advt

ಚಿಕ್ಕಮಗಳೂರು ಜಿಲ್ಲೆಯ ಕಡಬ ತಾಲೂಕಿನ ಉಳ್ಳಿನಾಗರ ಗ್ರಾಮದಲ್ಲಿ ಸರ್ಕಾರಿ ಜಮೀನು ಕಬಳಿಕೆ ಮಾಡಿರುವ ಪ್ರಕರಣದಲ್ಲಿ ಪ್ರಕರಣದಲ್ಲಿ ಕೆ ಎ ಎಸ್ ಅಧಿಕಾರಿ ಉಮೇಶ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದರು. ಜೈಲಿನಿಂದ ಹೊರಬರುತ್ತಿದ್ದಂತೆ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಹುಲಿ ಸಂರಕ್ಷಣ ಪ್ರದೇಶದಲ್ಲಿಯೂ ಅಧಿಕಾರಿ ಉಮೇಶ್ ಅಕ್ರಮವೆಸಗಿದ್ದಾರೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ಅವರನ್ನು ಅರಣ್ಯ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button