Belagavi NewsBelgaum NewsKannada NewsKarnataka NewsLatest

ವಿನೋದ ದೊಡ್ಡಣ್ಣವರ್ ಅವರಿಗೆ ಕಸಾಪ ಪ್ರಶಸ್ತಿ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ವತಿಯಿಂದ ನೀಡಲಾಗುವ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಪ್ರಶಸ್ತಿ ಈ ಬಾರಿ ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಅವರಿಗೆ ಲಭಿಸಿದೆ.

ಇತ್ತಿಚಿಗೆ ಕಸಾಪ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪಾಂಡಪ್ಪ ಲಕ್ಷ್ಮಣ ಹೂಗಾರ ಅವರು ಶೀವಶರಣೆ ಶಂಕ್ರಮ್ಮ ಹೂಗಾರ ಕಲಾದಗಿ ಇವರ ಸ್ಮರಣಾರ್ಥ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಶಿಕ್ಷಣ, ಸಮಾಜ ಸೇವೆ, ಶಿವ ಶರಣ ಸಾಹಿತ್ಯದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ನಗದು ಪ್ರಶಸ್ತಿ ನೀಡಿ ಸನ್ಮಾನಿಸಬೇಕೆಂಬುದು ದತ್ತಿ ದಾನಿಗಳ ಆಶಯವಾಗಿದೆ.
ಈ ಹಿನ್ನೆಲೆಯಲ್ಲಿ 2023ನೇ ಸಾಲಿನ ಈ ಪ್ರತಿಷ್ಠಿತ ಪ್ರಶಸ್ತಿಗೆ ವಿನೋದ ದೊಡ್ಡಣ್ಣವರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button