Kannada NewsLatestNational

*ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಅಪರಾಧಿಗೆ 97 ವರ್ಷ ಜೈಲುಶಿಕ್ಷೆ ಪ್ರಕಟಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ; ಕಾಸರಗೋಡು: 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 97 ವರ್ಷಗಳ ಜೈಲುಶಿಕ್ಷೆ ಹಾಗೂ 8.30 ಲಕ್ಷ ರೂಪಾಯಿ ದಂಡ ವಿಧಿಸಿ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಮಂಜೇಶ್ವರದ ಕುಂಜತ್ತುರು ಉದ್ಯಾವರದ 41 ವರ್ಷದ ಸಯ್ಯದ ಮುಹಮ್ಮದ್ ಬಶೀರ್ ಶಿಕ್ಷೆಗೊಳಗಾದ ಅಪರಾಧಿ.

ಕೇರಳ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚುವರ್ಷ ಜೈಲುಶಿಕ್ಷೆ ವಿಧಿಸಿದ ತೀರ್ಪು ಇದಾಗಿದೆ. ಈ ಹಿಂದೆ ಪಂತ್ತಂತಿಟ್ಟದಲ್ಲಿ ಪೊಕ್ಸೋ ಪ್ರಕರಣದಲ್ಲಿ 104 ವರ್ಷ ಸಜೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿತ್ತು. ಆ ಪ್ರಕರಣದ ಬಳಿಕ ಇದು ಎರಡನೇ ಸುದೀರ್ಘ ಜೈಲು ಶಿಕ್ಷೆಯ ತೀರ್ಪಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button