Latest

ಕಾಶಿ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಸಹಾಯಧನ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಶಿ ಯಾತ್ರಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿಶೇಷ ಸಹಾಯಧನ ಘೋಷಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಯಾತ್ರಾರ್ಥಿಗಳಿಗೆ ತಲಾ 5000 ರೂ. ನೀಡುವುದಾಗಿ ತಿಳಿಸಿದೆ.

ಸಾಮಾನ್ಯ ಜನರು, ಬಡವರಿಗಾಗಿ ಕಾಶಿ ವಿಶ್ವನಾಥ ದೇವರ ದರ್ಶನಕ್ಕಾಗಿ ವಿಶೇಷ ಸಹಾಯಧನ ನಿಟ್ಟಿನಲ್ಲಿ ಈ ಘೋಷಣೆ ಮಾಡಲಾಗಿದೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.

ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಗಳಿಗೆ ಪ್ಯಾಕೇಜ್ ಟ್ರಿಪ್ ಕೂಡ ಘೋಷಿಸಲಾಗಿದೆ. ಪುಣ್ಯ ಕ್ಷೇತ್ರಗಳಿಗೆ ಕೆಎಸ್ ಟಿಡಿಸಿ ವತಿಯಿಂದ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು.

ಶ್ರೀ ಶೈಲದಲ್ಲಿ 85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುವುದು, ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ದತ್ತಪೀಠದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್ ವೇ, ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ ಜೋಗದಲ್ಲಿ 116 ಕೋಟಿ ವೆಚ್ಚದಲ್ಲಿ ಹೋಟೆಲ್ ಮತ್ತು ರೋಪ್ ವೇ ನಿರ್ಮಾಣ ಹಾಗೂ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ ಮೀಸಲಾಗಿಡುವುದು ಎಂದು ಹೇಳಿದರು.

ಬೇಲೂರು, ಹಳೆಬೀಡು, ಸೋಮನಾಥಪುರ ಸೇರಿ ಹೊಯ್ಸಳರ‌ ಸ್ಮಾರಕ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗುವುದು. ಹಂಪಿ-ಬಾದಾಮಿ, ಐಹೊಳೆ- ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ, ಮೈಸೂರು-ಶ್ರೀರಂಗಪಟ್ಟಣ-ಹಾನ-ಬೇಲೂರು- -ಹಳೆಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.
ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕೆ ಅನುದಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button